ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, (Dengue Cases) ಸಾವು-ನೋವುಗಳು ಸಂಭವಿಸುತ್ತಿವೆ. ಹೀಗಾಗಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ (Health Department Guidelines) ಪ್ರಕಟಿಸಿದೆ.
ಕೊರೊನಾ ಸಂದರ್ಭದಲ್ಲಿ ವಾರ್ ರೂಮ್ ತೆರೆದಂತೆಯೇ ಜಿಲ್ಲಾ ಕೇಂದ್ರಗಳಲ್ಲಿ ಡೆಂಗ್ಯೂ ವಾರ್ ರೂಮ್ (Dengue War Room) ತೆರೆಯಲು ಸೂಚಿಸಲಾಗಿದೆ.

- ಒಂದೇ ಸ್ಥಳದಲ್ಲಿ ಎರಡು ಅಥವಾ ಮೂರು ಡೆಂಗ್ಯೂ ಕೇಸ್ ಕಂಡುಬಂದರೆ ಹಾಟ್ ಸ್ಪಾಟ್ ಘೋಷಣೆ.
- ಹಾಟ್ ಸ್ಪಾಟ್ ಗಳಲ್ಲಿ ಲಾರ್ವಾ ನಾಶ ಚಟುವಟಿಕೆ ತೀವ್ರಗೊಳಿಸುವುದು, ಒಳಾಂಗಣ/ಹೊರಾಂಗಣದಲ್ಲಿ ಲಾರ್ವಾನಾಶಕಗಳ ಬಳಕೆ ಹಾಗೂ ಒಳಾಂಗಣದಲ್ಲಿ ಡೆಂಗ್ಯೂ ನಾಶಕವನ್ನು ಸಿಂಪಡಿಸಲು ಸೂಚನೆ.
- ಡೆಂಗ್ಯೂ ಪಾಸಿಟಿವ್ ಆದ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತುರ್ತಾಗಿ ಸಕ್ರೀಯಗೊಳಿಸಬೇಕು.
- ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ನಿರೋಧಕ, ಬೇವಿನ ಎಣ್ಣೆ ವಿತರಣೆ ಖಚಿತಪಡಿಸಿಕೊಳ್ಳುವುದು ಹಾಗೂ ಕೈ, ಕಾಲು – ಕುತ್ತಿಗೆಯ ಭಾಗದಲ್ಲಿ ಹಚ್ಚಿಕೊಳ್ಳುವಂತೆ ತಿಳಿಸುವುದು.
- ಡೆಂಗ್ಯೂ ಪಾಸಿಟಿವ್ ಆದ ವ್ಯಕ್ತಿಯನ್ನ ಜ್ವರ ಕಾಣಿಸಿಕೊಂಡ ದಿನದಿಂದ 14 ದಿನಗಳ ಕಾಲ ಅನುಪಾಲನೆ ಮಾಡುವುದು
- ಬೇವಿನ ಎಣ್ಣೆ ಇಲ್ಲದೇ ಹೋದರೆ ಸಿಟ್ರೋನೆಲ್ ಆಯಿಲ್, ಲೆಮನ್ ಗ್ರೇಸ್ ಆಯಿಲ್ ಅಥವಾ ಡೀಟ್ ಆಧಾರಿತ ಕ್ರೀಂ ಆಯಿಲ್‌ಗಳನ್ನ ವಿತರಣೆ ಮಾಡಬೇಕು
- ಡೆಂಗ್ಯೂ ಪ್ರಕರಣಗಳ ನಿರ್ವಹಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಆಸ್ಫತ್ರೆಗಳಲ್ಲಿ 5 ರಿಂದ 10 ಹಾಸಿಗೆಗಳನ್ನು ಮೀಸಲಿಡಬೇಕು.
- ಡೆಂಗ್ಯೂ ಜ್ವರ ಪ್ರಕರಣಗಳ ಪರೀಕ್ಷೆ, ಚಿಕಿತ್ಸೆ ಹಾಗೂ ನಿರ್ವಹಣಾ ಸೌಲಭ್ಯವನ್ನು ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲಾ ಆರೋಗ್ಯ ಸಂಸ್ಥೆಗಳು ಎಲ್ಲರಿಗೂ ಸಂಪೂರ್ಣ ಉಚಿತವಾಗಿ ನೀಡಬೇಕು.
- ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಟೆಸ್ಟಿಂಗ್ ಕಿಟ್, ಅಗತ್ಯ ಪ್ರಮಾಣದ ಔಷಧಿ ಹಾಗೂ IV Fluids ಔಷಧ ದಾಸ್ತಾನು ಲಭ್ಯತೆಯನ್ನು ಖಚಿತಪಡಿಸಬೇಕು. ಜಿಲ್ಲಾವಾರು ಸರ್ಕಾರಿ ಹಾಗೂ ಖಾಸಗಿ ರಕ್ತನಿಧಿಗಳಿಂದ ಪ್ಲೇಟ್‌ಲೆಟ್, ಪ್ಲಾಸ್ಮಾ ಹಾಗೂ ಇತರ ಕಾಂಪೊನೆಂಟ್‌ಗಳ ಬಗ್ಗೆ ಪ್ರತಿದಿನ ಮಾಹಿತಿ ನೀಡಬೇಕು.
- ಕಡ್ಡಾಯವಾಗಿ ಡೆಂಗ್ಯೂ ಜ್ವರ ನಿರ್ವಹಣೆ ಸಂಬಂಧ ಶಿಷ್ಟಾಚಾರ ಪಾಲನೆ ಮಾಡುವಂತೆ ಸೂಚಿಸಲಾಗಿದೆ.