ಮೈಸೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚಳವಾಗುತ್ತಿದೆ. ಬೆಂಗಳೂರು ನಂತರ ಮೈಸೂರು ಜಿಲ್ಲೆಯಲ್ಲಿ ಕೂಡ ಡೆಂಗ್ಯೂ ಪ್ರಕರಣ ಹೆಚ್ಚಾಗಿ ದಾಖಲಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಯದುವೀರ್ ಒಡೆಯರ್, ಡೆಂಗ್ಯೂ ಪ್ರಕರಣ ಕುರಿತಂತೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಆನಂತರ ಅವರು ಆಸ್ಪತ್ರೆಯ ಪ್ರತಿ ವಾರ್ಡ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧ ಪಟ್ಟಂತೆ ಅಧಿಕಾರಿಗಳಿಂದಲೂ ಮಾಹಿತಿ ಪಡೆದರು.

ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದೇನೆ. ನಮ್ಮ ವೈದ್ಯರು ಕೂಡ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಡೆಂಗ್ಯೂ ನಿಯಂತ್ರಣ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಸಲಕರಣೆಯ ಕೊರತೆ ಇದ್ದು ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದರು. ಈ ವೇಳೆ ಸಂಸದ ಯದುವೀರ್ ಗೆಮಾಜಿ ಶಾಸಕ ಎಲ್ ನಾಗೇಂದ್ರ, ಡಿಎಚ್ ಓ ಡಾ.ಕುಮಾರಸ್ವಾಮಿ ಸಾಥ್ ಕೊಟ್ಟಿದ್ದಾರೆ.
