ಯಾದಗಿರಿ: ಮಹಾರಾಷ್ಟ್ರದ ಉಜನಿ, ವೀರ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆ ಯಾದಗಿರಿ ಜಿಲ್ಲೆಯ ಜೀವನಾಡಿ ಭೀಮಾನದಿಯ ಒಳಹರಿವು ಹೆಚ್ಚಾಗಿದ್ದು, ನದಿ ಪಾತ್ರದ ಜನರಲ್ಲಿ ಪ್ರವಾಹ ಆತಂಕ ಸೃಷ್ಠಿಯಾಗಿದೆ.

ಭೀಮಾನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಭೀಮಾನದಿಗೆ 1 ಲಕ್ಷ 60 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಜಿಲ್ಲಾಡಳಿತ ಭೀಮಾನದಿ ಪ್ರವಾಹ ಎದುರಿಸಲು ಸನ್ನದ್ಧವಾಗಿದ್ದು, ಈಗಾಗಲೇ ಪ್ರವಾಹ ಪೀಡಿತ 35 ಹಳ್ಳಿಗಳನ್ನು ಪಟ್ಟಿ ಮಾಡಿ, ನದಿ ಪಾತ್ರದ ಜನರು ಹಾಗೂ ಜಾನುವಾರುಗಳು ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಿದೆ.