ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಮನೆಗಳ್ಳರ ಹಾವಳಿ ಹೆಚ್ಚಾಗಿದ್ದು, ರಾತ್ರಿಯಾಗುತ್ತಿದಂತೆ ಒಂಟಿಯಾಗಿ ಬಂದು ಕಳ್ಳತನಕ್ಕೆ ಯತ್ನಿಸಲಾಗಿದೆ.
ರಾತ್ರಿಯಿಡೀ ಹೊಂಚು ಹಾಕಿದ ಖದೀಮ ಬೆಳಗಿನ ಜಾವ ಕಳ್ಳತನಕ್ಕೆ ಮುಂದಾಗಿದ್ದಾನೆ. ಕಾಂಪೌಂಡ್ ಹತ್ತಿ ಮನೆ ಒಳಗೆ ಹೋಗಿರುವ ಕಳ್ಳ, ಬಳಿಕ ಮನೆಯಲ್ಲಿ ಕಳ್ಳತನ ಮಾಡಲು ಸಾಧ್ಯವಾಗದೇ ಬರಿಗೈನಲ್ಲಿ ವಾಪಸ್ ಆಗಿದ್ದಾನೆ.
ಚಿಕ್ಕಮಗಳೂರಿನ ಟಿಪ್ಪು ನಗರದ ಸರ್ವೋದಯ ವಿದ್ಯಾಲಯ ರಸ್ತೆಯಲ್ಲಿರೋ ನಿಸ್ಸಾರ್ ಎಂಬುವವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದ್ದು, ಕಳ್ಳನ ಓಡಾಟದ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಈ ಘಟನೆ ನಡೆದಿದೆ.
ಇದನ್ನೂ ಓದಿ : ಹಾವೇರಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ ಬೀಳುತ್ತೆ ಫೈನ್!



















