ಬೆಂಗಳೂರು : ನಗರ ಹೊರವಲಯಗಳಲ್ಲಿ ಮಾತ್ರ ಕಂಡುಬರುತ್ತಿದ್ದ ವೀಲ್ಹಿಂಗ್ ಹಾವಳಿ ಇದೀಗ ನಗರದೊಳಗೂ ವ್ಯಾಪಿಸಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಸ್ತೆಯಲ್ಲಿ ಜನರು ಭಯಭೀತರಾಗಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಜೆ.ಪಿ ನಗರ ವ್ಯಾಪ್ತಿಯ ಡಾಲರ್ಸ್ ಕಾಲೋನಿ ಪ್ರದೇಶದಲ್ಲಿ ಪುಂಡರು ಬೈಕ್ ವೀಲ್ಹಿಂಗ್ ಸ್ಟಂಟ್ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಡಾಲರ್ಸ್ ಕಾಲೋನಿಯ 3ನೇ ಮುಖ್ಯ ರಸ್ತೆ, 4ನೇ ಕ್ರಾಸ್‌ನಲ್ಲಿ ಯುವಕರು ಅಪಾಯಕಾರಿ ಬೈಕ್ ಸ್ಟಂಟ್ ಮಾಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಶಾಲಾ ಮಕ್ಕಳು ಓಡಾಡುವ ಪ್ರದೇಶದಲ್ಲೇ ವೀಲ್ಹಿಂಗ್ ನಡೆಸಿರುವುದು ಪೋಷಕರಲ್ಲಿ ಆತಂಕ ಹೆಚ್ಚಿಸಿದೆ. ವಾಹನ ಸವಾರರು ಹಾಗೂ ಪಾದಚಾರಿಗಳು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದ್ದು, ಸ್ಥಳೀಯರು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ನಗರದಲ್ಲಿ ಹೆಚ್ಚುತ್ತಿರುವ ವೀಲ್ಹಿಂಗ್ ಹಾವಳಿಗೆ ಯಾವಾಗ ಬ್ರೇಕ್ ಬೀಳುತ್ತದೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಂಡು ಇಂತಹ ಅಪಾಯಕಾರಿ ಸ್ಟಂಟ್‌ಗಳನ್ನು ತಡೆಯಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಇದನ್ನೂ ಓದಿ : ಹೆತ್ತ ತಂದೆಯನ್ನೇ ಕೊಂ” ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!



















