ಕೋಲಾರ : ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಟೀಚರ್ಸ್ ಕಾಲೋನಿಯಲ್ಲಿ ರಾತ್ರಿ ವೇಳೆ ಮಾಸ್ಕ್ ಧರಿಸಿ ನಾಲ್ಕೈದು ಮಂದಿ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟೀಚರ್ಸ್ ಕಾಲೋನಿಯ ಮನೆಯೊಂದರಲ್ಲಿ ಎರಡು ದಿನಗಳ ಹಿಂದೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಇದರ ಬೆನ್ನಲ್ಲೇ ಕಳ್ಳರ ಓಡಾಟದ ದೃಶ್ಯಗಳು ಕೂಡ ವೈರಲ್ ಆಗಿರುವುದು ನಗರವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ಮನೆಗೆ ಬೀಗ ಹಾಕಿರುವುದನ್ನೇ ಕಳ್ಳರು ಟಾರ್ಗೆಟ್ ಮಾಡುತ್ತಿದ್ದು, ಯಾರೂ ಇಲ್ಲದಿರುವುದನ್ನು ಗಮನಿಸಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಕಳ್ಳರ ಹಾವಳಿಗೆ ಸ್ಥಳೀಯರು ಬೆಚ್ಚಿಬಿದ್ದಿದ್ದು, ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವುದು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ನಿವಾಸಿಗಳು ಒತ್ತಾಯಿಸಿದ್ದಾರೆ.
ಹಾಗೆಯೇ ಕಳ್ಳರ ಓಡಾಟದ ದೃಶ್ಯಗಳನ್ನು ಆಧರಿಸಿ ಮುಳಬಾಗಿಲು ನಗರ ಪೊಲೀಸರು ಖದೀಮರ ಪತ್ತೆಗೆ ಬಲೆ ಬೀಸಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಕಳ್ಳರ ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.
ಇದನ್ನೂ ಓದಿ : ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್ ಕದನಕ್ಕೆ ವೇದಿಕೆ ಸಿದ್ಧ? ಮೈಕ್ ಹೈಸನ್ ಹೇಳಿದ್ದೇನು?



















