ಬೆಂಗಳೂರು ; ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇಂಡಿಯನ್ ಬ್ಯಾಂಕ್ ಅಂಗಸಂಸ್ಥೆಯಾಗಿರುವ ಇಂಡ್ ಬ್ಯಾಂಕ್ ಮರ್ಚಂಟ್ ಬ್ಯಾಂಕಿಂಗ್ ಸರ್ವಿಸಸ್ ಸಂಸ್ಥೆಯಲ್ಲಿ ನಲ್ಲಿ ಖಾಲಿ (Indbank Recruitment 2026) ಇರುವ 14 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಯಾವುದು ಎಂಬುದರ ಮಾಹಿತಿ ಇಲ್ಲಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡ್ ಬ್ಯಾಂಕ್ ಮರ್ಚಂಟ್ ಬ್ಯಾಂಕಿಂಗ್ ಸರ್ವಿಸಸ್
ಒಟ್ಟು ಹುದ್ದೆಗಳು: 14
ಅರ್ಜಿ ಸಲ್ಲಿಕೆ ಮಾದರಿ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 31
8 ರಿಲೇಷನ್ ಶಿಪ್ ಮ್ಯಾನೇಜರ್ ಹಾಗೂ 6 ಡೀಲರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮ್ಯೂಚುವಲ್ ಫಂಡ್, ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡಿದ ಅನುಭವ ಇರುವವರಿಗೆ ಆದ್ಯತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಎಂಬಿಎ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 5 ಲಕ್ಷ ರೂಪಾಯಿವರೆಗೆ ಸಂಬಳದ ಪ್ಯಾಕೇಜ್ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ https://www.indbankonline.com/ ಗೆ ಭೇಟಿ ನೀಡಬೇಕು
ನಿಮ್ಮ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಅಧಿಸೂಚನೆಯಲ್ಲಿ ತಿಳಿಸಿದ ವಿಳಾಸಕ್ಕೆ ಕಳುಹಿಸಬೇಕು
ಇದನ್ನೂ ಓದಿ ; ಹೀರೋ ವಿಡಾ VX2 ಪ್ಲಸ್ 4.4kWh ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ : ಬರೋಬ್ಬರಿ 187 ಕಿ.ಮೀ ಮೈಲೇಜ್!



















