ಉಡುಪಿ : ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಬಿಜೆಪಿ ಮುಖಂಡ ಮತ್ತು ರಟ್ಟಾಡಿ ಶ್ರೀರಟೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮುಖ್ಯಸ್ಥ ನವೀನ್ ಚಂದ್ರ ಶೆಟ್ಟಿ ರಟ್ಟಾಡಿ ವಿರುದ್ಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನೆ(ಸೆ.05)ರಂದು ನಡೆಯಲಿದ್ದ ಧರ್ಮಸ್ಥಳದ ಧರ್ಮ ಸಂರಕ್ಷಣಾ ಯಾತ್ರೆಯ ಸಭೆಯ ಆಮಂತ್ರಣ ಪತ್ರಿಕೆ ನೀಡುವ ಉದ್ದೇಶದಿಂದ ರಟ್ಟಾಡಿ ಶ್ರೀರಟ್ಟೆಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮುಖ್ಯಸ್ಥ ಹಾಗೂ ಬಿಜೆಪಿ ಮುಖಂಡ ನವೀನಚಂದ್ರ ಶೆಟ್ಟಿ ರಟ್ಟಾಡಿ ಅವರಿಗೆ ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದ 29ರ ಹರೆಯದ ರಟ್ಟಾಡಿ ಗ್ರಾಮದ ಮಹಿಳೆ ಸೆ.2ರಂದು ಕರೆ ಮಾಡಿದ್ದರು. ಈ ಬಳಿಕ ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.