T20 World Cup 2024 ಕೊನೆಯ ಹಂತಕ್ಕೆ ಬಂದು ನಿಂತಿದೆ. ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ ತಂಡವನ್ನು ಸೋಲಿಸುವ ಮೂಲಕ ಅಪ್ಘಾನಿಸ್ತಾನ್ ಸೆಮಿಫೈನಲ್ ಗೆ ಲಗ್ಗೆಯಿಟ್ಟಿದೆ.
20 ತಂಡಗಳೊಂದಿಗೆ ಆರಂಭವಾದ ಟೂರ್ನಿಯು ಸದ್ಯ 4 ತಂಡಗಳ ಕದನವಾಗಿ ಮಾರ್ಪಟ್ಟಿದೆ. ನಾಕೌಟ್ ಹಂತಕ್ಕೆ ಸೌತ್ ಆಫ್ರಿಕಾ, ಇಂಗ್ಲೆಂಡ್, ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಸೆಣಸಾಟ ನಡೆಸಲಿವೆ. ಸೆಮಿಫಾನಲ್ ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. ಮೊದಲ ಸೆಮಿ ಫೈನಲ್ ಟ್ರಿನಿಡಾಟ್-ಟೊಬಾಗೊದಲ್ಲಿ ನಡೆದರೆ, ಎರಡನೇ ಪಂದ್ಯವು ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ಜರುಗಲಿದೆ.
ಮೊದಲ ಸೆಮಿಫೈನಲ್ ಪಂದ್ಯವು ಜೂನ್ 27 ರಂದು ನಡೆಯಲಿದ್ದು, ಸೌತ್ ಆಫ್ರಿಕಾ ಮತ್ತು ಅಫ್ಘಾನಿಸ್ತಾನ್ ತಂಡಗಳುಮುಖಾಮುಖಿಯಾಗಲಿವೆ. ಈ ಪಂದ್ಯವು ಭಾರತೀಯ ಕಾಲಮಾನದ ಬೆಳಿಗ್ಗೆ 6 ಗಂಟೆಗೆ ಆರಂಭವಾಗಲಿದೆ. ಎರಡನೇ ಸೆಮಿಫೈನಲ್ ಪಂದ್ಯವು ಜೂನ್ 27 ರಂದು ನಡೆಯಲಿದ್ದು, ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಆರಂಭವಾಗಲಿದೆ.
ಎರಡು ಸೆಮಿಫೈನಲ್ನಲ್ಲಿ ಗೆದ್ದ ತಂಡಗಳು ಫೈನಲ್ ಪ್ರವೇಶಿಸಲಿದ್ದು, ಜೂನ್ 29 ರಂದು ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಅಂತಿಮ ಸೆಣಸಾಟ ನಡೆಸಲಿವೆ. ಈ ಪಂದ್ಯದೊಂದಿಗೆ 9ನೇ ಆವೃತ್ತಿಯ ಟಿ20 ವಿಶ್ವಕಪ್ ಅಂತ್ಯ ಸಿಗಲಿದೆ.