ಕ್ಯಾನ್ಬೆರಾ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಮಳೆಗಾಹುತಿಯಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದ್ದ ಕಾರಣ ಇಂದಿನ ಪಂದ್ಯವನ್ನ ರದ್ದುಗೊಳಿಸಲಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ ಟಿ20 ಸರಣಿ ಇಂದಿನಿಂದ ಶುರುವಾಗಿದ್ದು, ಮೊದಲ ಪಂದ್ಯ ಮಳೆಗೆ ಬಲಿಯಾಗಿದೆ. ಕ್ಯಾನ್ಬೆರಾದ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 35 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತು. 5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 43 ರನ್ ಗಳಿಸಿದ್ದಾಗ ಮೊದಲ ಬಾರಿಗೆ ಮಳೆ ಶುರುವಾಯ್ತು.

ಮಳೆ ನಿಂತ ಕೆಲ ಸಮಯದ ಬಳಿಕ ಮತ್ತೆ ಬ್ಯಾಟಿಂಗ್ ಶುರು ಮಾಡಿದ ಗಿಲ್, ಸೂರ್ಯಕುಮಾರ್ ಯಾದವ್ ಜೋಡಿ ಆಸೀಸ್ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿದರು. 10ನೇ ಓವರ್‌ನ ಮೊದಲ 4 ಎಸೆತಗಳಲ್ಲೇ ವೇಗಿ ನಾಥನ್ ಎಲ್ಲಿಸ್‌ಗೆ ಸೂರ್ಯ 15 ರನ್ ಬಾರಿಸಿದ್ದರು. ಇದರೊಂದಿಗೆ ಭಾರತ ಬೃಹತ್ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿತ್ತು. ಅಲ್ಲದೇ ಪಂದ್ಯ ಗೆಲ್ಲುವ ವಿಶ್ವಾಸವೂ ಇತ್ತು.
ಭಾರತ 9.4 ಓವರ್‌ಗೆ ಒಂದು ವಿಕೆಟ್ ಕಳೆದುಕೊಂಡು 97 ರನ್ ಗಳಿಸಿದ ವೇಳೆ ಮತ್ತೆ ಜೋರಾಗಿ ಮಳೆ ಸುರಿಯಲಾರಂಭಿಸಿತು. ಬಳಿಕ ಮಳೆ ಬಿಡುವು ಕೊಡದ ಹಿನ್ನೆಲೆ ಪಂದ್ಯವನ್ನು ಯಾವುದೇ ಫಲಿತಾಂಶವಿಲ್ಲದೇ ರದ್ದುಗೊಳಿಸಲಾಯಿತು. ಹೀಗಾಗಿ ಪಂದ್ಯ ವೀಕ್ಷಿಸಲು ಬಂದಿದ್ದ ಪ್ರೇಕ್ಷಕರಿಗೂ ಬಾರೀ ನಿರಾಸೆಯಾಗಿದೆ. ಅಕ್ಟೋಬರ್ 31ರ ಶುಕ್ರವಾರ ಮೆಲ್ಬರ್ನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 2ನೇ ಟಿ20 ಪಂದ್ಯ ನಡೆಯಲಿದೆ.
ಇದನ್ನೂ ಓದಿ : ಲಂಚ ಪಡೆಯುತ್ತಿದ್ದಾಗ ರೆಡ್‌ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ಸರ್ಕಾರಿ ವಕೀಲೆ



















