ಮುಂಬೈ : ಮಹಿಳಾ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ನಾಳೆ (ಅಕ್ಟೋಬರ್ 30) ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಲೀಗ್ ಹಂತದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದಾಗ ರನ್ ಮಳೆಯೇ ಹರಿದಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ 300 ಕ್ಕೂ ಅಧಿಕ ರನ್ ಕಲೆಹಾಕಿತ್ತು. ಆದಾಗ್ಯೂ ಆಸ್ಟ್ರೇಲಿಯಾದ ಬಲಿಷ್ಠ ಬ್ಯಾಟಿಂಗ್ನ ಎದುರು ಹರ್ಮನ್ ಪಡೆ ಸೋಲನುಭವಿಸಿತ್ತು. ಇದೀಗ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿರುವ ಟೀಂ ಇಂಡಿಯಾ, ಲೀಗ್ ಹಂತದ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.
ಸೆಮಿಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ವಿಶ್ವಕಪ್ ಸೆಮಿಫೈನಲ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:00 ಗಂಟೆಗೆ ಆರಂಭವಾಗಲಿದೆ.
ಸೆಮಿಫೈನಲ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಆನ್‌ಲೈನ್ ವೀಕ್ಷಕರು ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು.
ಇದನ್ನೂ ಓದಿ : ರಾಜ್ಯ ಕರಾವಳಿಗೂ ತಟ್ಟಿದ ‘ಮೊಂಥಾ’ ಸೈಕ್ಲೋನ್ ಎಫೆಕ್ಟ್ | ಉಡುಪಿಯ ಮಟ್ಟು ಬೀಚ್‌ನಲ್ಲಿ ಭಾರೀ ಕಡಲ್ಕೊರೆತ!



















