ವೆಸ್ಟ್ ಇಂಡೀಸ್ ಮಾಸ್ಟರ್ಸ್ ವಿರುದ್ಧ ಸಚಿನ್ ತೆಂಡೂಲ್ಕರ್ ನೇತೃತ್ವದ ಇಂಡಿಯಾ ಮಾಸ್ಟರ್ಸ್ ತಂಡ ಮಾಸ್ಟರ್ಸ್ ಲೀಗ್ (International Masters League) ಟಿ20 ಗೆದ್ದು ಬೀಗಿದೆ.
ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವನ್ನು ಇಂಡಿಯಾ ಮಾಸ್ಟರ್ಸ್ ತಂಡ ಮಣಿಸಿ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 147 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಭಾರತ ಮಾಸ್ಟರ್ಸ್ ತಂಡ ಇನ್ನೂ 17 ಎಸೆತಗಳು ಬಾಕಿ ಇರುವಾಗಲೇ ಗೆದ್ದು ಬೀಗಿದೆ.
ಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ಮಾಸ್ಟರ್ಸ್ ತಂಡಕ್ಕೆ ಬ್ಯಾಟ್ಸಮನ್ ಗಳು ಕೈ ಕೊಟ್ಟರು. ಪರಿಣಾಮ ಅಲ್ಪ ಮೊತ್ತ ಗಳಿಸುವಂತಾಯಿತು. ಸಿಮನ್ಸ್ 41 ಎಸೆತಗಳಲ್ಲಿ 57 ರನ್ ಗಳಿಸಿದರು. ಡ್ವೇನ್ ಸ್ಮಿತ್ 45 ರನ್ ಗಳಿಸಿದರು. ವಿಕೆಟ್ ಕೀಪರ್ ದಿನೇಶ್ ರಾಮ್ದಿನ್ ಅಜೇಯ 12 ರನ್ ಗಳಿಸಿದರು. ಆದರೆ, ಈ ಮೂವರನ್ನು ಹೊರತು ಪಡಿಸಿದರೆ, ಇನ್ನುಳಿದವರಿಗೆ ಎರಡಂಕಿಯನ್ನು ದಾಟಲು ಕೂಡ ಆಗಲಿಲ್ಲ. ಪರಿಣಾಮ ವೆಸ್ಟ್ ಇಂಡೀಸ್ ಮಾಸ್ಟರ್ಸ್ ಅಲ್ಪ ಮೊತ್ತಕ್ಕೆ ಕುಸಿಯಿತು. ಭಾರತದ ಪರ ವಿನಯ್ ಕುಮಾರ್ 3 ವಿಕೆಟ್ ಪಡೆದರೆ, ಶಾದಾಬ್ ನದೀಮ್ 2 ವಿಕೆಟ್ ಪಡೆದರು. ಪವನ್ ನೇಗಿ ಮತ್ತು ಸ್ಟುವರ್ಟ್ ಬಿನ್ನಿ ತಲಾ 1 ವಿಕೆಟ್ ಪಡೆದು ಮಿಂಚಿದರು.
148 ರನ್ಗಳ ಗುರಿ ಬೆನ್ನಟ್ಟಿದ ಇಂಡಿಯಾ ಮಾಸ್ಟರ್ಸ್ಗೆ ಉತ್ತಮ ಆರಂಭ ಸಿಕ್ಕಿತು. ನಾಯಕ ಸಚಿನ್ ತೆಂಡೂಲ್ಕರ್ ಹಾಗೂ ಅಂಬಾಟಿ ರಾಯುಡು ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ರಾಯುಡು 50 ಎಸೆತಗಳಲ್ಲಿ 74 ರನ್ ಗಳಿಸಿದರು. ನಾಯಕ ಸಚಿನ್ ತೆಂಡೂಲ್ಕರ್ 18 ಎಸೆತಗಳಲ್ಲಿ 25 ರನ್ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಗುರುಕಿರತ್ ಸಿಂಗ್ ಮಾನ್ 14 ರನ್ ಗಳಿಸಿದರು. ಯುವರಾಜ್ ಸಿಂಗ್ (13 ರನ್) ಮತ್ತು ಸ್ಟುವರ್ಟ್ ಬಿನ್ನಿ (16 ರನ್) ಜೋಡಿ ಭಾರತವನ್ನು ಗೆಲುವಿನತ್ತ ತೆಗೆದುಕೊಂಡು ಹೋದರು.