ಭಾರತ ಹಾಗೂ ಪಾಕಿಸ್ತಾನ ಮಧ್ಯೆ ನಡೆಯುತ್ತಿದ್ದ ಸಂಘರ್ಷ ಅಂತ್ಯ ಕಂಡಿದೆ. ಕದನ ವಿರಾಮಕ್ಕೆ ಎರಡೂ ರಾಷ್ಟ್ರಗಳು ಮುಂದಾಗಿವೆ. ಭಾರತದ ದಾಳಿಗೆ ಪಾಕಿಸ್ತಾನ್ ತತ್ತರಿಸಿ ಹೋಗಿದೆ. ಈಗ ಅಮೆರಿಕದ ಮಧ್ಯಸ್ಥಿಕೆ ಬಗ್ಗೆ ಟ್ರಂಪ್ ಮಾತನಾಡಿದ್ದಾರೆ. ಬಿಕ್ಕಟ್ಟನ್ನು ಶಮನಗೊಳಿಸಲು “ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆ” ಆಯ್ಕೆ ಮಾಡಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.
ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಕೂಡ ಟ್ವೀಟ್ ಮಾಡಿ, “ಕಳೆದ 48 ಗಂಟೆಗಳಲ್ಲಿ ಅಮೆರಿಕದ ಉಪಾಧ್ಯಕ್ಷ ವ್ಯಾನ್ಸ್ ಮತ್ತು ನಾನು ಭಾರತದ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಭಾರತದ ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಮತ್ತು ಅಸಿಮ್ ಮಲಿಕ್ ಸೇರಿದಂತೆ ಹಿರಿಯ ಭಾರತೀಯ ಮತ್ತು ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಕದನ ವಿರಾಮಕ್ಕೆ ಎರಡೂ ರಾಷ್ಟ್ರಗಳು ಒಪ್ಪಿಕೊಂಡಿವೆ. ಶಾಂತಿ ಮಾರ್ಗ ಆಯ್ಕೆಗೊಂಡ ಎರಡೂ ರಾಷ್ಟ್ರಗಳ ಪ್ರಧಾನಿಗಳಿಗೆ ಧನ್ಯವಾದ ಎಂದು ಹೇಳಿದ್ದಾರೆ.



















