ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂಬುದು ಕೋಟ್ಯಂತರ ಜನರ ಕನಸಾಗಿರುತ್ತದೆ. ಒಳ್ಳೆಯ ಸಂಬಳ ಸೇರಿ ಹಲವು ಸೌಕರ್ಯಗಳು ಲಭಿಸುತ್ತವೆ. ಜೀವನ ಸೆಟಲ್ ಆಗುತ್ತಿದೆ ಎಂದು ಕನಸು ಕಾಣುತ್ತಿರುತ್ತಾರೆ. ಈ ಕನಸು ಈಗ ನನಸು ಮಾಡಿಕೊಳ್ಳುವ ಸಮಯ ಬಂದಿದೆ. ಹೌದು, ಭಾರತೀಯ ಅಂಚೆ ಇಲಾಖೆಯು ಕರ್ನಾಟಕ ಸೇರಿ ದೇಶಾದ್ಯಂತ 21,413 ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಎಸ್ಸೆಸ್ಸೆಲ್ಸಿ ಪಾಸಾದವರೂ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳು ಮತ್ತು ಸಂಬಳ
ಗ್ರಾಮೀಣ ಡಾಕ್ ಸೇವಕ್ (ವೇತನ: 10,000-29,380 ರೂ.), ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (10,000-29,380 ರೂ.), ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (10,000-24,470 ರೂ.) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಯಾವುದೇ ಸಿಇಟಿ ಇರುವುದಿಲ್ಲ. ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿದರೆ, ಮೆರಿಟ್ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಫೆಬ್ರವರಿ 10ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್ 3 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಂಚೆ ಇಲಾಖೆಯ https://indiapostgdsonline.gov.in/ಗೆ ಭೇಟಿ ನೀಡಬೇಕು. ಮೊದಲಿಗೆ ನೋಂದಣಿ ಮಾಡಿಕೊಳ್ಳಬೇಕು. ನಂತರ ಮತ್ತೆ ಲಾಗ್ ಇನ್ ಆಗಿ, ಅರ್ಜಿ ಸಲ್ಲಿಸಬೇಕು. ಶುಲ್ಕ ಪಾವತಿಸಿದ ಬಳಿಕ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ಹಾಗೂ ಹಾಗೂ ಗರಿಷ್ಠ 40 ವರ್ಷ ಆಗಿರಬೇಕು. ಎಸ್ಸಿ, ಎಸ್ಟಿಯವರಿಗೆ 5 ವರ್ಷ, ಒಬಿಸಿಯವರಿಗೆ 3 ವರ್ಷ ಸಡಿಲಿಕೆ ಇದೆ. ಎಲ್ಲ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದ ಬಳಿಕ ಸ್ವಯಂಚಾಲಿತವಾಗಿ ನಿರ್ಣಯಿಸುವ ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ನಂತರ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳ ದಾಖಲೆ ಪರಿಶೀಲಿಸಿ, ನೇಮಕಾತಿ ನೀಡಲಾಗುತ್ತದೆ.