ಬೆಂಗಳೂರು: ಭಾರತೀಯ ಅಂಚೆಯು ಕೇಂದ್ರ ಸರ್ಕಾರದ ವಿಶ್ವಾಸಾರ್ಹ ಸಂಸ್ಥೆಯಾಗಿದೆ. ಈಗ ಕೇವಲ ಅಂಚೆ ಕಚೇರಿಯಾಗಿ ಉಳಿಯದೆ ಬ್ಯಾಂಕಿಂಗ್ ಸೇವೆಗಳನ್ನೂ ನೀಡಲಾಗುತ್ತಿದೆ. ಈಗ ಭಾರತೀಯ ಅಂಚೆಯ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 348 ಹುದ್ದೆಗಳ (India Post IPPB GDS Executive Recruitment 2025) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಮೂಲಕ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್
ಒಟ್ಟು ಹುದ್ದೆ: 348
ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 29
ದೇಶಾದ್ಯಂತ ಇರುವ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕರ್ನಾಟಕದಲ್ಲೂ 19 ಹುದ್ದೆಗಳು ಖಾಲಿ ಇವೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ ವಯಸ್ಸು 35 ಆಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 750 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://ibpsonline.ibps.in/ippblaug25/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಂಡು, ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕು.