ಬೆಂಗಳೂರು: ಕೇಂದ್ರ ಸರ್ಕಾರಿ ಹುದ್ದೆ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಇದಕ್ಕಾಗಿ ನಿರಂತರ ಪ್ರಯತ್ನ ಮಾಡುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಅಂಚೆ ಇಲಾಖೆಯಲ್ಲಿ (India Post Recruitment 2025) ಖಾಲಿ ಇರುವ 100 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ
ಹುದ್ದೆಗಳ ಸಂಖ್ಯೆ: 100
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 21
ಅಸಿಸ್ಟಂಟ್ ಪೋಸ್ಟಲ್ ಟ್ರೈನಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕ, ಮಹಾರಾಷ್ಟ್ರ, ಬಿಹಾರ ಹಾಗೂ ಕೇರಳದಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ indiapost.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ಅಸಿಸ್ಟಂಟ್ ಪೋಸ್ಟಲ್ ಟ್ರೈನಿ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಅಧಿಸೂಚನೆಯನ್ನು ಸರಿಯಾಗಿ ಓದಬೇಕು
ಬಳಿಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು



















