ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ, ಅದರಲ್ಲೂ ಭಾರತೀಯ ಅಂಚೆಯಲ್ಲಿ ಕೆಲಸ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಭಾರತೀಯ ಅಂಚೆಯಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (India Post Recruitment 2026) ಹೊರಡಿಸಲಾಗಿದೆ. 4 ಪೇಂಟರ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ
ಒಟ್ಟು ಹುದ್ದೆಗಳು: 4
ಹುದ್ದೆಗಳ ಹೆಸರು: ಪೇಂಟರ್ ಇತ್ಯಾದಿ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 18
ಮೆಕ್ಯಾನಿಕ್, ಪೇಂಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ಮಂಡಳಿಗಳಲ್ಲಿ 8ನೇ ತರಗತಿ ಪಾಸಾದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 19,900 ರೂಪಾಯಿಯಿಂದ 63 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ indiapost.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅರ್ಜಿ ಸಮೇತ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
The Manager, Mail Motor Service, Department of Posts, No.4, Basaveshwara Road, Vasanth Nagar, Bengaluru-560001
ಇದನ್ನೂ ಓದಿ : ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!



















