ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ, ಅದರಲ್ಲೂ ಭಾರತೀಯ ಅಂಚೆಯಲ್ಲಿ ಕೆಲಸ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಭಾರತೀಯ ಅಂಚೆಯಲ್ಲಿ ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (India Post Recruitment 2026) ಹೊರಡಿಸಲಾಗಿದೆ. 11 ನುರಿತ ಕುಶಲಕರ್ಮಿಗಳ (Skilled Artisans) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ
ಒಟ್ಟು ಹುದ್ದೆಗಳು: 11
ಹುದ್ದೆಗಳ ಹೆಸರು: ನುರಿತ ಕುಶಲಕರ್ಮಿಗಳು
ಉದ್ಯೋಗ ಸ್ಥಳ: ಮುಂಬೈ, ಮಹಾರಾಷ್ಟ್ರ
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 31
ಎಂವಿ ಮೆಕ್ಯಾನಿಕ್, ಎಂವಿ ಎಲೆಕ್ಟ್ರಿಶಿಯನ್, ಟರ್ನರ್, ವೆಲ್ಡರ್, ಟೈರ್ ಮ್ಯಾನ್, ಬ್ಲ್ಯಾಕ್ ಸ್ಮಿತ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಐಟಿಐ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 19,900 ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ indiapost.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅರ್ಜಿ ಸಮೇತ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Office of the Senior Manager, Mail Motor Service, 134- A. S. K. Ahire Marg, Worli, Mumbai-400018
ಇದನ್ನೂ ಓದಿ : ಯುದ್ಧದ ಕಾರ್ಮೋಡ.. ಬೆಂಗಳೂರಿನಿಂದ ಗಲ್ಫ್ ಪ್ರವಾಸಕ್ಕೂ ಹೊಡೆತ!



















