ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ, ಅದರಲ್ಲೂ ಭಾರತೀಯ ಅಂಚೆಯಲ್ಲಿ ಕೆಲಸ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಭಾರತೀಯ ಅಂಚೆಯಲ್ಲಿ ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (India Post Recruitment 2026) ಹೊರಡಿಸಲಾಗಿದೆ. 11 ಸ್ಟಾಫ್ ಕಾರು ಚಾಲಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ
ಒಟ್ಟು ಹುದ್ದೆಗಳು: 11
ಹುದ್ದೆಗಳ ಹೆಸರು: ಸ್ಟಾಫ್ ಕಾರು ಚಾಲಕ
ಉದ್ಯೋಗ ಸ್ಥಳ: ಬೆಂಗಳೂರು, ಮೈಸೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 30
ಬೆಂಗಳೂರಿನಲ್ಲಿ 10 ಹುದ್ದೆಗಳು ಖಾಲಿ ಇದ್ದರೆ, ಮೈಸೂರಿನಲ್ಲಿ 1 ಹುದ್ದೆ ಖಾಲಿ ಇದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹಾಗೆಯೇ, ಅಭ್ಯರ್ಥಿಗಳು ವಾಹನ ಚಾಲನಾ ಪರವಾನಗಿ ಹೊಂದಿರುವುದು ಕಡ್ಡಾಯವಾಗಿದೆ. ಕನಿಷ್ಠ 3 ವರ್ಷ ವಾಹನ ಚಲಾಯಿಸಿದ ಅನುಭವ ಇರಬೇಕು. ಗರಿಷ್ಠ 56 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 18 ಸಾವಿರ ರೂಪಾಯಿಯಿಂದ 63,200 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ indiapost.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅರ್ಜಿ ಸಮೇತ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
The Manager, Mail Motor Service, No. 4, Basaveshwara Road, Vasanthanagar, Bengaluru – 560001.
ಇದನ್ನೂ ಓದಿ : ಜಹೀರ್ ಖಾನ್‌ಗೂ ಮುನ್ನ CSK ಕಣ್ಣಲ್ಲಿ ಆಶಿಷ್ ನೆಹ್ರಾ ; ಕೋಚ್ ಆಯ್ಕೆ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ


















