ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಅಂಚೆ ಇಲಾಖೆಯಲ್ಲಿ (India Post Recruitment 2026) ಖಾಲಿ ಇರುವ 20 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
ಹುದ್ದೆ ಹೆಸರು: ಅಸಿಸ್ಟಂಟ್ ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆ: 20
ಉದ್ಯೋಗ ಸ್ಥಳ: ಬೆಂಗಳೂರು, ಮೈಸೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 23
ಕರ್ನಾಟಕದ ಮೈಸೂರು, ಬೆಂಗಳೂರು, ತೆಲಂಗಾಣದ ಹೈದರಾಬಾದ್, ಮಹಾರಾಷ್ಟ್ರದ ಮುಂಬೈ ಸೇರಿ ದೇಶದ ಹಲವೆಡೆ ಕಾರ್ಯನಿರ್ವಹಿಸಲು ಬಯಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 15 ಅಸಿಸ್ಟಂಟ್ ಮ್ಯಾನೇಜರ್ ಹಾಗೂ 5 ಟೆಕ್ನಿಕಲ್ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ, ಡಿಪ್ಲೋಮಾ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 9,300 ರೂಪಾಯಿಯಿಂದ 34,800 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ indiapost.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ವಿಶ್ವದ ಆರ್ಥಿಕ ಶಕ್ತಿಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದ ಭಾರತ – IMF ವರದಿಯ ಸಂಪೂರ್ಣ ವಿವರ ಇಲ್ಲಿದೆ!



















