ಬೆಂಗಳೂರು : ಕೇಂದ್ರ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಭರ್ಜರಿ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಅಂಚೆ ಇಲಾಖೆಯಲ್ಲಿ (India Post Recruitment 2026) ಖಾಲಿ ಇರುವ 25 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
ಹುದ್ದೆ ಹೆಸರು: ಗ್ರಾಮೀಣ ಡಾಕ್ ಸೇವಕ್
ಒಟ್ಟು ಹುದ್ದೆ: 25 ಸಾವಿರ
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 214
ಕರ್ನಾಟಕ ಸೇರಿ ದೇಶದ ಹಲವೆಡೆ ಕಾರ್ಯನಿರ್ವಹಿಸಲು ಬಯಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಮೆರಿಟ್ ಲಿಸ್ಟ್, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 29,380 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ indiapost.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ ; ಕೊಚ್ಚಿ ಹೋದ ಕಟ್ಟಡಗಳ ನಡುವೆ ಅಚಲವಾಗಿ ನಿಂತ ಮನೆ ; ನೇಪಾಳ ಪ್ರವಾಹದ ಭಯಾನಕ ವಿಡಿಯೋ ಇಲ್ಲಿದೆ!



















