ಈಗಾಗಲೇ ಪುರುಷರ ಟಿ20 ವಿಶ್ವಕಪ್ ಮುಕ್ತಾಯವಾಗಿದ್ದು, ಮಹಿಳಾ ಟಿ20 ವಿಶ್ವಕಪ್ ಗೆ ದಿನಗಣನೆ ಆರಂಭವಾಗಿದೆ. ಆದರೆ, ಈ ಬಾರಿಯ ಮಹಿಳಾ ವಿಶ್ವಕಪ್ ಗೆ ಆರಂಭಕ್ಕೂ ಮುನ್ನವೇ ವಿಘ್ನ ಎದುರಾಗಿದೆ.
ಈ ಬಾರಿಯ ಮಹಿಳಾ ವಿಶ್ವಕಪ್ ಟಿ20ಯ ಆತಿಥ್ಯವನ್ನು ಬಾಂಗ್ಲಾದೇಶ ವಹಿಸಿಕೊಂಡಿತ್ತು. ಆದರೆ, ಅಲ್ಲಿನ ಅಶಾಂತಿಯಿಂದಾಗಿ ಈ ಐಸಿಸಿ ಟೂರ್ನಿ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹೀಗಾಗಿ ಬಾಂಗ್ಲಾದೇಶದ ಬದಲು ಭಾರತ, ಶ್ರೀಲಂಕಾ ಹಾಗೂ ಯುಎಇಯಲ್ಲಿ ಟಿ20 ವಿಶ್ವಕಪ್ ಆಯೋಜಿಸಲು ಐಸಿಸಿ ತಯಾರಿ ನಡೆಸುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ಆದರೆ ಐಸಿಸಿಯ ಈ ನಡೆಗೆ ಬಿಸಿಸಿಐ ಒಪ್ಪಿಗೆ ಸೂಚಿಸಿಲ್ಲ. 20204 ರ ಮಹಿಳಾ ಟಿ20 ವಿಶ್ವಕಪ್ ಆತಿಥ್ಯ ವಹಿಸಿಕೊಳ್ಳಲು ಬಿಸಿಸಿಐ ನಿರಾಕರಿಸಿದೆ.
ಅಕ್ಟೋಬರ್ ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಹೇಳಿದ್ದಾರೆ ಎಂದು ವರದಿಯಾಗಿದೆ. ಸದ್ಯ ದೇಶದಲ್ಲಿ ಮಾನ್ಸೂನ್ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ. ಅಲ್ಲದೇ, ಮುಂದಿನ ಆವೃತ್ತಿಯ ಟಿ20 ವಿಶ್ವಕಪ್ ಗೆ ಭಾರತ ಆತಿಥ್ಯ ವಹಿಸುತ್ತಿದೆ. ಹೀಗಾಗಿ ನಾವು ನಿರಂತರ ಆಯೋಜನೆಯ ಕುರಿತು ಸೂಚನೆ ನೀಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.