ನವದೆಹಲಿ : ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ಐದು ಪಂದ್ಯಗಳ ಟಿ20 ಸರಣಿ ಆಡುತ್ತಿರುವ ಟೀಂ ಇಂಡಿಯಾ, ಆ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.
ಇದೀಗ ಆ ಟೆಸ್ಟ್ ಸರಣಿಗೆ ಬಿಸಿಸಿಐ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಈ ಸರಣಿಯು ನವೆಂಬರ್ 14ರಂದು ಪ್ರಾರಂಭವಾಗಲಿದ್ದು, ಶುಭ್ಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದಿಂದಾಗಿ ಕಳೆದ ತವರು ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡಿದ್ದ ರಿಷಭ್ ಪಂತ್ ತಂಡವನ್ನು ಕೂಡಿಕೊಂಡಿದ್ದು, ಉಪನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಟೆಸ್ಟ್ ಸರಣಿಗೆ ಭಾರತ ತಂಡ :
ಶುಭ್ಮನ್ ಗಿಲ್ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್, ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಹಾಲಿನ ದರ ಏರಿಕೆಯಾಗುತ್ತಾ? – ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಸುಳಿವು



















