ಭಾರತ ಹಾಗೂ ಬಾಂಗ್ಲಾದೇಶ ಮಧ್ಯೆ ಟೆಸ್ಟ್ ಟೂರ್ನಿ ಆರಂಭವಾಗಿದೆ. ಇದರ ಮಧ್ಯೆ ಬಾಂಗ್ಲಾ ವಿರುದ್ಧ ನಡೆಯಲಿರುವ ಟಿ20 ಸರಣಿಗಾಗಿ ಭಾರತ ತಂಡ ಪ್ರಕಟಿಸಲಾಗಿದೆ.
ಉಭಯ ತಂಡಗಳ ನಡುವೆ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ತಂಡ ಪ್ರಕಟಿಸಲಾಗಿದೆ. ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ನಡೆಯಲ್ಲಿದ್ದು, ಬಿಸಿಸಿಐ ಈ ಸರಣಿಗೆ 15 ಸದಸ್ಯರ ಬಲಿಷ್ಠ ಭಾರತ ತಂಡ ಪ್ರಕಟಿಸಿದೆ. ಎಂದಿನಂತೆ ತಂಡದ ನಾಯಕತ್ವ ಸೂರ್ಯಕುಮಾರ್ ಯಾದವ್ ಗೆ ನೀಡಲಾಗಿದೆ.
ಇಬ್ಬರು ಹೊಸ ಆಟಗಾರರು ಸ್ಥಾನ ಪಡೆದಿದ್ದಾರೆ. ಐಪಿಎಲ್ ನಲ್ಲಿ ಲಕ್ನೋ ಪರ ಬೆಂಕಿ ಬೌಲಿಂಗ್ ಮಾಡಿದ್ದ ಮಯಾಂಕ್ ಯಾದವ್, ಸನ್ ರೈಸರ್ಸ್ ಹೈದರಾಬಾದ್ ಪರ ಆಲ್ ರೌಂಡರ್ ಆಟದ ಮೂಲಕ ಗಮನ ಸೆಳೆದಿದ್ದ ನಿತೀಶ್ ಕುಮಾರ್ ರೆಡ್ಡಿ ಸ್ಥಾನ ಪಡೆದಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ರಿಷಬ್ ಪಂತ್ ಗೆ ವಿಶ್ರಾಂತಿ ನೀಡಲಾಗಿದೆ. ಜಿತೇಶ್ ಶರ್ಮಾ ಎರಡನೇ ವಿಕೆಟ್ ಕೀಪರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ:ಸೂರ್ಯಕುಮಾರ್ ಯಾದವ್, (ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್ ಸ್ಥಾನ ಪಡೆದಿದ್ದಾರೆ.