ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ ಡ್ತಾದತ್ತ ಮುಖ ಮಾಡಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಭಾರತ ತಂಡದ ನಾಯಕ ರೋರಿದ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (152) ಹಾಗೂ ಸ್ಟೀವ್ ಸ್ಮಿತ್ (101) ಆಕರ್ಷಕ ಶತಕ ಸಿಡಿಸಿದ್ದರು. ಪರಿಣಾಮ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ ನಲ್ಲಿ 445 ರನ್ ಕಲೆಹಾಕಿ ಆಲೌಟ್ ಆಯಿತು.
ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಒಂದೆಡೆ ಕ್ರೀಸ್ ಕಚ್ಚಿ ನಿಂತ ಕೆಎಲ್ ರಾಹುಲ್ 139 ಎಸೆತಗಳಲ್ಲಿ 8 ಫೋರ್ ಗಳೊಂದಿಗೆ 84 ರನ್ ಬಾರಿಸಿದರು. ಕೆಳ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ 77 ರನ್ ಗಳಿಸಿದರು. 10ನೇ ವಿಕೆಟ್ಗೆ ಜೊತೆಗೂಡಿದ ಜಸ್ ಪ್ರೀತ್ ಬುಮ್ರಾ (10) ಹಾಗೂ ಆಕಾಶ್ ದೀಪ್ (31) 47 ರನ್ ಗಳ ಜೊತೆಯಾಟವಾಡುವ ಮೂಲಕ ಫಾಲೋ ಆನ್ ತಪ್ಪಿಸಿದರು. ಹೀಗಾಗಿ ಭಾರತ ತಂಡವು 260 ರನ್ ಗಳಿಗೆ ಆಲೌಟ್ ಆಯಿತು.
ಮಳೆಬಾಧಿತ ಈ ಪಂದ್ಯವು 5ನೇ ದಿನದಾಟಕ್ಕೆ ಕಾಲಿಟಿದ್ದು, ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್ ಆರಂಭಿಸಬೇಕಿದೆ. 185 ರನ್ ಗಳ ಮುನ್ನಡೆ ಹೊಂದಿರುವ ಆಸ್ಟ್ರೇಲಿಯಾ ತಂಡ ದೊಡ್ಡ ಟಾರ್ಗೆಟ್ ನೀಡಿದರೂ ಪಂದ್ಯ ಡ್ರಾದಲ್ಲಿ ಅಂತ್ಯವಾಗಲಿದೆ.