ಭಾರತೀಯ ಮಹಿಳಾ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ಮಹಿಳಾ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದೆ.
ವಡೋದರಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ವನಿತೆಯರು 115 ರನ್ ಗಳ ಭರ್ಜರಿ ಜಯ ಸಾಧಿಸಿದ್ದಾರೆ. ಅಲ್ಲದೇ, ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಕೂಡ ಭಾರತ ಜಯ ಸಾಧಿಸಿತ್ತು. ಈಗ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಗೆದ್ದುಕೊಂಡಿದೆ.
ಮೊದಲ ಪಂದ್ಯವನ್ನು ಭಾರತ ತಂಡ 211 ರನ್ ಗಳಿಂದ ಗೆದ್ದುಕೊಂಡಿದೆ. ಎರಡನೇ ಏಕದಿನ ಪಂದ್ಯದಲ್ಲೂ 115 ರನ್ ಗಳ ಬೃಹತ್ ಜಯ ಸಾಧಿಸಿದೆ. ಇದರೊಂದಿಗೆ ಟಿ20 ಹಾಗೂ ಏಕದಿನ ಸರಣಿಗಳರೆಡನ್ನೂ ಭಾರತ ವನಿತೆಯರು ಗೆದ್ದುಕೊಂಡಿದ್ದಾರೆ. ಟಿ20 ಸರಣಿಯನ್ನೂ ಭಾರತ ತಂಡ 2-1 ಅಂತರದಿಂದ ಗೆದ್ದುಕೊಂಡಿತ್ತು. ಈಗ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿ, ಸರಣಿ ವಶಕ್ಕೆ ಪಡೆದಿದೆ. ಇನ್ನೊಂದು ಪಂದ್ಯ ಬಾಕಿಯಿದೆ.