ಧರ್ಮಶಾಲಾ | ಭಾರತ ಮತ್ತು ದಕ್ಷಿಣ ಆಫ್ರಿಕಾ ಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಸರಣಿ ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿದೆ. ಟೀಮ್ ಇಂಡಿಯಾ ಮೊದಲ ಪಂದ್ಯವನ್ನು 101 ರನ್‌ಗಳಿಂದ ಗೆದ್ದರೆ, ಆಫ್ರಿಕನ್ ತಂಡ ಎರಡನೇ ಟಿ20 ಪಂದ್ಯವನ್ನು 51 ರನ್‌ಗಳಿಂದ ಗೆದ್ದುಕೊಂಡಿತು. ಹೀಗಾಗಿ ಎರಡೂ ತಂಡಗಳು ಸರಣಿಯಲ್ಲಿ ಮುನ್ನಡೆ ಸಾಧಿಸಲು ಪ್ರಯತ್ನಿಸಲಿವೆ.
ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಇದರ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಭಾರತ ತಂಡದಲ್ಲಿ 2 ಬದಲಾವಣೆಗಳಾಗಿದ್ದರೆ, ಆಫ್ರಿಕಾ ತಂಡದಲ್ಲಿ 3 ಬದಲಾವಣೆಗಳಾಗಿವೆ.
ಈ ಪಂದ್ಯಕ್ಕಾಗಿ ಪ್ಲೇಯಿಂಗ್-11ರಲ್ಲಿ ಭಾರತ ಎರಡು ಬದಲಾವಣೆಗಳನ್ನು ಮಾಡಿದೆ. ಅಕ್ಷರ್ ಪಟೇಲ್ ಮತ್ತು ಜಸ್ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅಕ್ಷರ್ ಆರೋಗ್ಯ ಹದಗೆಟ್ಟಿರುವುದರಿಂದ ಅವರು ಈ ಪಂದ್ಯದಲ್ಲಿ ಆಡುತ್ತಿಲ್ಲ. ಆದರೆ ಬುಮ್ರಾ ವೈಯಕ್ತಿಕ ಕಾರಣಗಳಿಂದ ಮನೆಗೆ ಹೋಗಬೇಕಾಗಿದ್ದು, ಅವರೂ ಕೂಡ ಈ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಸೂರ್ಯ ಹೇಳಿದ್ದಾರೆ. ಹೀಗಾಗಿ ಇವರಿಬ್ಬರ ಬದಲು ಕುಲ್ದೀಪ್ ಯಾದವ್ ಮತ್ತು ಹರ್ಷಿತ್ ರಾಣಾ ಆಡುತ್ತಿದ್ದಾರೆ. ಇತ್ತ ದಕ್ಷಿಣ ಆಫ್ರಿಕಾ ನಾಯಕ ಐಡೆನ್ ಮಾರ್ಕ್ರಾಮ್ ಕೂಡ ಪ್ಲೇಯಿಂಗ್ ಹನ್ನೊಂದರಲ್ಲಿ ಮೂರು ಬದಲಾವಣೆಗಳನ್ನು ಮಾಡಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ : ಭಾರತದಿಂದ ಮೋದಿ, ಅಮಿತ್ ಶಾ, RSS ಸರ್ಕಾರವನ್ನು ಖಾಲಿ ಮಾಡಿಸ್ತೇವೆ.. ಇದು ನನ್ನ ಗ್ಯಾರಂಟಿ | ರಾಹುಲ್ ಗಾಂಧಿ


















