ಜೈಪುರ: ಭಾರತೀಯ ವಾಯುಪಡೆಯ (IAF) ಜಾಗ್ವಾರ್ ವಿಮಾನ (Jaguar Fighter Jet) ತರಬೇತಿ ವೇಳೆ ಪತನಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಇಬ್ಬರು ಪೈಲೆಟ್ ಗಳು (Pilots) ಸಾವನ್ನಪ್ಪಿದ್ದಾರೆ. ಈ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ಭಾನೋಡ ಗ್ರಾಮದಲ್ಲಿ ನಡೆದಿದೆ. ದೈನಂದಿನ ತರಬೇತಿ ವೇಳೆ ಬಾನೋಡಾ ಗ್ರಾಮದ ಕೃಷಿ ಭೂಮಿಯಲ್ಲಿ ವಿಮಾನ ಪತನಗೊಂಡಿದೆ. ಇಬ್ಬರು ಪೈಲೆಟ್‌ಗಳು ಸಾವನ್ನಪ್ಪಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಂದು ಮಧ್ಯಾಹ್ನದ ವೇಳೆಗೆ ಈ ಘಟನೆ ನಡೆದಿದೆ. ಆಸ್ತಿ-ಪಾಸ್ತಿಗಳಿಗೆ ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದೆ.