ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾರತೀಯ ಭದ್ರತಾ ಪಡೆ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.
ಕುಲ್ಗಾಮ್‌ನ ಬೆಹಿಬಾಗ್ ಪ್ರದೇಶದಲ್ಲಿ ನಡೆದಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಹೆಚ್ಚಿನ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ. ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದರು ಪರಿಸ್ಥಿತಿ ಉದ್ವಿಗ್ನವಾಗಿದೆ.
ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಕುರಿತು ಮಾಹಿತಿ ಪಡೆದ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
ಇತ್ತೀಚೆಗೆ ಜಮ್ಮ ಮತ್ತು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಎನ್ ಕೌಂಟರ್ ಗಳು ಹೆಚ್ಚಾಗುತ್ತಿವೆ.ಭದ್ರತಾ ಪಡೆಗಳು ಭಯೋತ್ಪಾದಕರ ಅಟ್ಟಹಾಸಕ್ಕೆ ಬ್ರೇಕ್ ಹಾಕುತ್ತಲೇ ಇವೆ. ಕಾಶ್ಮೀರದ ಶ್ರೀನಗರ ಮತ್ತು ಜಮ್ಮುವಿನ ಚೆನಾಬ್ ಕಣಿವೆ, ಉಧಮ್‌ಪುರ ಮತ್ತು ಕಥುವಾ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಉಗ್ರ ಚಟುವಟಿಕೆ ಬಂದ್ ಆಗಿದ್ದವು. ಆದರೆ, ಇತ್ತೀಚೆಗೆ ಮತ್ತೆ ಚಿಗುರುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಭಯೋತ್ಪಾದನೆ ಎದುರಿಸಲು ಹಾಗೂ ಹೊಡೆದು ಹಾಕಲು ಸಮಗ್ರ ಕಾರ್ಯತಂತ್ರದ ಅಗತ್ಯವಿದೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ.