ಬೆಂಗಳೂರು : ದೇಶದ ಸೇನೆಯಲ್ಲಿ ಕೆಲಸ ಮಾಡಬೇಕು, ದೇಶಕ್ಕೆ ಸೇವೆ ಸಲ್ಲಿಸಬೇಕು ಎಂಬುದು ತುಂಬ ಜನರ ಕನಸಾಗಿರುತ್ತದೆ. ಆ ಕನಸನ್ನು ನನಸು ಮಾಡಿಕೊಳ್ಳಲು ಈಗ ಒಳ್ಳೆಯ ಅವಕಾಶ ಲಭಿಸಿದೆ. ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ (Indian Army TES 56 Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ದೇಶದ ಸೇನೆಯ ಟೆಕ್ನಿಕಲ್ ಎಂಟ್ರಿ ಸ್ಕೀಮ್ ಅಡಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಸೇನೆ
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ಕಮಿಷನ್ಡ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 12
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪಿಯುಸಿ ಪಾಸಾದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜೆಇಇ ಮೇನ್ಸ್ 2026 ಪರೀಕ್ಷೆಯ ಅಂಕಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ https://joinindianarmy.nic.in/Authentication.aspx ವೆಬ್ ಸೈಟ್ ಗೆ ಭೇಟಿ ನೀಡಬೇಕು
“Officer Entry Apply/Login” ಮೇಲೆ ಕ್ಲಿಕ್ ಮಾಡಬೇಕು
ಇಮೇಲ್, ಮೊಬೈಲ್ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಅರ್ಜಿಯನ್ನು ಸಲ್ಲಿಸಿ, ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ ; ಕೊಹ್ಲಿ ಕ್ರೇಜ್.. ಲಕ್ನೋ ಏಕನಾ ಕ್ರೀಡಾಂಗಣದಲ್ಲಿ 345 ಚದರ ಅಡಿಯ ಬೃಹತ್ ಕಲಾಕೃತಿ ಅನಾವರಣ!



















