ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕು, ಕೈತುಂಬ ಸಂಬಳ ಪಡೆಯಬೇಕು ಎಂದು ಬಯಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇಂಡಿಯನ್ ಬ್ಯಾಂಕಿನಲ್ಲಿ ಖಾಲಿ (Indian Bank Recruitment 2025) ಇರುವ ಸ್ಪೆಷಲಿಸ್ಟ್ ಆಫೀಸರ್ ಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಯಾವುದು ಎಂಬುದರ ಮಾಹಿತಿ ಇಲ್ಲಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಬ್ಯಾಂಕ್
ಒಟ್ಟು ಹುದ್ದೆಗಳು: 171
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 10
ಉದ್ಯೋಗದ ಸ್ಥಳ: ದೇಶಾದ್ಯಂತ
ಚೀಫ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 175 ರೂ. ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 1 ಸಾವಿರ ರೂ. ಅರ್ಜಿ ಶುಲ್ಕವಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ www.indianbank.in/career/ ಗೆ ಭೇಟಿ ನೀಡಬೇಕು
ನಿಮ್ಮ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು