ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಲಕ್ಷಾಂತರ ರೂಪಾಯಿ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಇಂಡಿಯನ್ ಬ್ಯಾಂಕ್‌ನಲ್ಲಿ (Indian Bank SO Recruitment 2026) ಖಾಲಿ ಇರುವ ಮ್ಯಾನೇಜರ್ ಸೇರಿ 350 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಬ್ಯಾಂಕ್
ಒಟ್ಟು ಹುದ್ದೆಗಳು: 350
ಹುದ್ದೆಗಳ ಹೆಸರು: ಮ್ಯಾನೇಜರ್ ಇತ್ಯಾದಿ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 28
ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಡಿಪ್ಲೋಮಾ, ಎಂಬಿಎ, ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 1.05 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ. ಒಬಿಸಿ ಅಭ್ಯವರ್ಥಿಗಳಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ 175 ರೂ. ಅರ್ಜಿ ಶುಲ್ಕ ಇದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 1,000 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್ ಲೈನ್ ಮೂಲಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ indianbank.bank.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಜಯ ಮೃತ್ಯುಂಜಯ ಸ್ವಾಮೀಜಿ ಲೈಂಗಿಕ ಕಿರುಕುಳ ಕೇಸ್‌ಗೆ ಬಿಗ್ ಟ್ವಿಸ್ಟ್ – ಮಹಿಳೆಯಿಂದ ಸ್ಫೋಟಕ ಹೇಳಿಕೆ!



















