ಬೆಂಗಳೂರು : ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ (Indian Coast Guard Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಫೋರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ನೌಕಾಪಡೆ
ಹುದ್ದೆಗಳ ಹೆಸರು: ಫೋರ್ ಮ್ಯಾನ್
ಒಟ್ಟು ಹುದ್ದೆಗಳು: 4
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 3
ಕರ್ನಾಟಕದ ಉತ್ತರ ಕನ್ನಡ, ಒಡಿಶಾದ ಭುವನೇಶ್ವರ, ಲಕ್ಷದ್ವೀಪ ಹಾಗೂ ಗುಜರಾತ್ ನ ಅಮ್ರೇಲಿಯಲ್ಲಿ ತಲಾ 1 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಗರಿಷ್ಠ 30 ವರ್ಷದೊಳಗಿನವರು ಆಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ, ಅರ್ಜಿಗಾಗಿ ಅಭ್ಯರ್ಥಿಗಳು indiancoastguard.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Director General, {For PD (Rectt)} Coast Guard Headquarters, Directorate of Recruitment, C-1, Phase II, Industrial Area, Sector-62, Noida, U.P– 201309.
ಇದನ್ನೂ ಓದಿ : ಪ್ಯಾಕೆಟ್ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?



















