ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (Indian Coast Guard Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ನೌಕಾಪಡೆ
ಹುದ್ದೆಗಳ ಹೆಸರು: ಮಲ್ಟಿ ಟಾಸ್ಕಿಂಗ್ ಸ್ಟಾಫ್
ಒಟ್ಟು ಹುದ್ದೆಗಳು: 3
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 20
ಮೆಕ್ಯಾನಿಕಲ್ ಫಿಟ್ಟರ್, ಗುಮಾಸ್ತ ಹಾಗೂ ಸ್ವೀಪರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಐಟಿಐ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಗರಿಷ್ಠ 27 ವರ್ಷದೊಳಗಿನವರು ಆಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ, ಅರ್ಜಿಗಾಗಿ ಅಭ್ಯರ್ಥಿಗಳು joinindiancoastguard.cdac.in ವೆಬ್ ಸೈಟ್ ಗೆ ಭೇಟಿ ನೀಡಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Directorate of Recruitment Coast Guard Headquarters, Coast Guard Administrative Complex C-1, Phase II, Industrial Area, Sector-62,Noida, U.P. – 201309
ಇದನ್ನೂ ಓದಿ: ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ಟೆಕ್ನಿಶಿಯನ್ ಹುದ್ದೆ ನೇಮಕ : ಬೆಂಗಳೂರಿನಲ್ಲೇ ಕೆಲಸ



















