ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 365 ಹುದ್ದೆಗಳ ನೇಮಕಾತಿಗಾಗಿ (Indian Coast Guard Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ನಾವಿಕ, ಯಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ನೌಕಾಪಡೆ
ಹುದ್ದೆಗಳ ಹೆಸರು: ನಾವಿಕ, ಯಾಂತ್ರಿಕ
ಒಟ್ಟು ಹುದ್ದೆಗಳು: 365
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 21
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ಸಡಿಲಿಕೆ ಇದೆ. ದಾಖಲೆ ಪರಿಶೀಲನೆ, ಬಯೋಮೆಟ್ರಿಕ್ ಪರಿಶೀಲನೆ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ joinindiancoastguard.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು.
ಇದನ್ನೂ ಓದಿ :ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!


















