ಬೆಂಗಳೂರು : ದೇಶದ ಸೇನೆಯಲ್ಲಿ ಕೆಲಸ ಮಾಡಬೇಕು, ದೇಶ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಹೌದು, ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಅಗ್ನಿವೀರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಗ್ನಿವೀರ್ ಸೀನಿಯರ್ ಸೆಕೆಂಡರಿ (ಎಸ್ ಎಸ್ ಆರ್) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ನೌಕಾಪಡೆ
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 6
ಹುದ್ದೆಯ ಹೆಸರು: ಅಗ್ನಿವೀರ್
ವಿದ್ಯಾರ್ಹತೆ ಏನು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಕಡ್ಡಾಯವಾಗಿ ಗಣಿತ ಮತ್ತು ಭೌತಶಾಸ್ತ್ರ ಒಳಗೊಂಡ ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಪರ್ಯಾಯವಾಗಿ, ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮೂರು ವರ್ಷಗಳ ಎಂಜಿನಿಯರಿಂಗ್ ಡಿಪ್ಲೋಮಾ ಅಥವಾ ಎರಡು ವರ್ಷಗಳ ವೃತ್ತಿಪರ ಕೋರ್ಸ್ ಪೂರ್ಣಗೊಳಿಸಿದವರು ಕೂಡ ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 2027ರ ಬ್ಯಾಚ್ ಗೆ ಡಿಸೆಂಬರ್ 2004 ರಿಂದ ಮೇ 2009 ರ ನಡುವೆ ಜನಿಸಿರಬೇಕು ಹಾಗೂ ಫೆಬ್ರವರಿ 2027ರ ಬ್ಯಾಚ್ ಗೆ ಮೇ 2005 ರಿಂದ ಅಕ್ಟೋಬರ್ 2009ರ ನಡುವೆ ಜನಿಸಿರಬೇಕು. ಭಾರತೀಯ ನೌಕಾಪಡೆಯ ಪ್ರವೇಶ ಪರೀಕ್ಷೆ (INET) ನಡೆಯಲಿದೆ. ಇದಾದ ಬಳಿಕ ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://www.joinindiannavy.gov.in/ ಗೆ ಭೇಟಿ ನೀಡಬೇಕು
ಅಗ್ನಿವೀರ್ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!



















