ಬೆಂಗಳೂರು: ನಾವೂ ದೇಶದ ಸೇವೆ ಮಾಡಬೇಕು, ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂಬುದು ಲಕ್ಷಾಂತರ ಯುವಕ-ಯುವತಿಯರ ಕನಸಾಗಿರುತ್ತದೆ. ಈ ಕನಸು ನನಸು ಮಾಡಿಕೊಳ್ಳಲು ಈಗ ಸುವರ್ಣ ಅವಕಾಶವೊಂದು ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಹೌದು, ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 15 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನವಾಗಿದೆ.
ಭಾರತೀಯ ನೌಕಾಪಡೆಯಲ್ಲಿ ಎಸ್ ಎಸ್ ಸಿ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಸಿಎ, ಎಂಸಿಎ, ಎಂಎಸ್ಸಿ, ಬಿಇ ಅಥವಾ ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾರಿಗೂ ಶುಲ್ಕವನ್ನು ನಿಗದಿಪಡಿಸಿಲ್ಲ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ನೌಕಾಪಡೆ
ಹುದ್ದೆಗಳ ಹೆಸರು: ಎಸ್ ಎಸ್ ಸಿ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳು: 15
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 17
ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 56,100 ರೂಪಾಯಿ ವೇತನ ನೀಡಲಾಗುತ್ತದೆ. ಮೆರಿಟ್ ಪಟ್ಟಿ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಗಸ್ಟ್ 2ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಅಲ್ಲಿಯವರೆಗೆ ಅಭ್ಯರ್ಥಿಗಳು ಅವಶ್ಯ ದಾಖಲೆಗಳನ್ನು ತಯಾರಿ ಮಾಡಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ joinindiannavy.gov.in ಗೆ ಭೇಟಿ ನೀಡಬೇಕು
ಇಂಡಿಯನ್ ನೇವಿ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಎಸ್ ಎಸ್ ಎಸ್ ಕಾರ್ಯನಿರ್ವಾಹಕ ಹುದ್ದೆಯ ಅಧಿಸೂಚನೆ ಓದಬೇಕು
ಆನ್ ಲೈನ್ ನಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಎಲ್ಲ ವಿವರಗಳು, ದಾಖಲೆಗಳನ್ನು ಅಪ್ ಲೋಡ್ ಮಾಡಿದ ಬಳಿಕ ಅರ್ಜಿ ಸಲ್ಲಿಸಬೇಕು



















