ಬೆಂಗಳೂರು : ಭಾರತೀಯ ಸೇನೆ ಸೇರಬೇಕು, ದೇಶ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ಲಭಿಸಿದೆ. ಹೌದು, ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 275 ಹುದ್ದೆಗಳ ನೇಮಕಾತಿಗಾಗಿ (ndian Navy Recruitment 2026) ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ನೌಕಾಪಡೆ
ಒಟ್ಟು ಹುದ್ದೆಗಳು: 275
ಹುದ್ದೆಗಳ ಹೆಸರು: ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 27
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್, ಎಂಬಿಎ, ಪಿಜಿ ಡಿಪ್ಲೋಮಾ, ಎಂಎಸ್ಸಿ, ಎಂಸಿಎ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.
2002ರ ಜುಲೈ 2 ಹಾಗೂ 2008ರ ಜುಲೈ 1ರ ನಡುವೆ ಜನಿಸಿದವರು ಅರ್ಜಿಗಳನ್ನು ಸಲ್ಲಿಸಲಬಹುದು ಎಂದು ತಿಳಿಸಲಾಗಿದೆ. ಎಸ್ ಎಸ್ ಬಿ ಸಂದರ್ಶನ, ವೈದ್ಯಕೀಯ ಪರೀಕ್ಷೆ ಹಾಗೂ ಮೆರಿಟ್ ಲಿಸ್ಟ್ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ joinindiannavy.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.
ಇದನ್ನೂ ಓದಿ : ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ನೇಮಕಾತಿ : 2.61 ಲಕ್ಷ ರೂ. ಭರ್ಜರಿ ಸ್ಯಾಲರಿ


















