ಬೆಂಗಳೂರು: ಭಾರತೀಯ ಸೇನೆ ಸೇರಬೇಕು, ದೇಶ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ಲಭಿಸಿದೆ. ಹೌದು, ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 44 ಹುದ್ದೆಗಳ ನೇಮಕಾತಿಗಾಗಿ (ndian Navy Recruitment 2026) ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಡೆಟ್ ಎಂಟ್ರಿ ಸ್ಕೀಮ್ ಪೋಸ್ಟ್ ಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ನೌಕಾಪಡೆ
ಒಟ್ಟು ಹುದ್ದೆಗಳು: 44
ಹುದ್ದೆಗಳ ಹೆಸರು: ಕೆಡೆಟ್ ಎಂಟ್ರಿ ಸ್ಕೀಮ್ ಪೋಸ್ಟ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 19
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ joinindiannavy.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ 30 ಸಾವಿರ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು



















