ಬೆಂಗಳೂರು : ಭಾರತೀಯ ಸೇನೆ ಸೇರಬೇಕು, ದೇಶದ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಲಭಿಸಿದೆ. ಹೌದು, ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 50 ಹುದ್ದೆಗಳ ನೇಮಕಾತಿಗಾಗಿ (Indian Navy Recruitment 2026) ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 50 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ನೌಕಾಪಡೆ
ಒಟ್ಟು ಹುದ್ದೆಗಳು: 50
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 10
ಎಲೆಕ್ಟ್ರಿಶಿಯನ್, ಫಿಟ್ಟರ್, ಮೆಷಿನಿಸ್ಟ್, ಪೈಪ್ ಫಿಟ್ಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಅಥವಾ ಐಟಿಐ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಮೆರಿಟ್ ಲಿಸ್ಟ್, ಟ್ರೇಡ್ ಟೆಸ್ಟ್, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ joinindiannavy.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಬೇಕು. ಇದಾದ ಬಳಿಕ ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.
ಇದನ್ನೂ ಓದಿ : ಗಾಲೆ ಟೆಸ್ಟ್ನಲ್ಲಿ ‘ಸೂಪರ್ಮ್ಯಾನ್’ ಆದ ಗಿಲ್ : ಒಂಟಿ ಕೈಯಲ್ಲಿ ಹಿಡಿದ ಅದ್ಭುತ ಕ್ಯಾಚ್ಗೆ ಕ್ರಿಕೆಟ್ ಜಗತ್ತು ಫಿದಾ!



















