ಬೆಂಗಳೂರು: ಭಾರತೀಯ ಸೇನೆ ಸೇರಬೇಕು, ದೇಶ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ಲಭಿಸಿದೆ. ಹೌದು, ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 260 ಹುದ್ದೆಗಳ ನೇಮಕಾತಿಗಾಗಿ (ndian Navy Recruitment 2026) ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ನೌಕಾಪಡೆ
ಒಟ್ಟು ಹುದ್ದೆಗಳು: 260
ಹುದ್ದೆಗಳ ಹೆಸರು: ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 24
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹಾಗೆಯೇ, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.60ರಷ್ಟು ಅಂಕ ಪಡೆದಿರುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ oinindiannavy.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. SSC Officer January 2027 ಆಪ್ಶನ್ ಮೇಲೆ ಕ್ಲಿಕ್ ಮಾಡಬೇಕು. ನೋಂದಣಿ ಮಾಡಿಕೊಂಡ ಬಳಿಕ, ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಅಂಚೆ ಇಲಾಖೆಯಲ್ಲಿ 28,740 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು


















