ಬೆಂಗಳೂರು: ಆರ್ ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಮೆಟ್ರೋ ತನ್ನ ಸೇವಾ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.
ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಹೀಗಾಗಿ ನಾಳೆ ನಡೆಯಲಿರುವ ಪಂದ್ಯಕ್ಕೆ ಮೆಟ್ರೋ ವಿಸ್ತರಿಸಲಾಗಿದೆ.
ನಾಳೆ ಮೆಟ್ರೋ ಸೇವೆ ಮಧ್ಯರಾತ್ರಿ 12.30ರ ವರೆಗೆ ವಿಸ್ತರಣೆ ಮಾಡಲಾಗಿದೆ. ಅಲ್ಲದೇ, ನಾಳೆಯಿಂದ ಪಂದ್ಯ ನಡೆಯಲಿರುವ ದಿನಗಳಲ್ಲಿ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ಏಪ್ರಿಲ್ 2, 10, 18, 24 ಹಾಗೂ ಮೇ 3, 13, 17 ರಂದು ಆರ್ ಸಿಬಿ ಪಂದ್ಯ ನಡೆಯಲಿದ್ದು, ಮೆಟ್ರೋ ಸೇವೆ ವಿಸ್ತರಿಸಲಾಗಿದೆ.
ಪಂದ್ಯ ನಡೆಯುವ ದಿನ ನಾಲ್ಕು ಟರ್ಮಿನಲ್ ನಿಂದ ಕೊನೆ ರೈಲು ಸೇವೆಯನ್ನು 12.30ರ ವರೆಗೆ ವಿಸ್ತರಿಸಲಾಗಿದೆ. ವೈಟ್ ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆ 12.30ರ ವರೆಗೆ ವಿಸ್ತರಣೆ ಮಾಡಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮಜೆಸ್ಟಿಕ್ ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 1.15 ಕ್ಕೆ ಹೊರಡಲಿದೆ. ಬೇರೆ ದಿನ ಎಂದಿನಂತೆ ರಾತ್ರಿ 11.30 ವರೆಗೆ ಮೆಟ್ರೋ ಸಂಚಾರ ಇರಲಿದೆ ಎಂದು ಬಿಎಂಆರ್ ಸಿಎಲ್ ನಿಂದ ಪ್ರಕಟಣೆ ಹೊರಡಿಸಲಾಗಿದೆ.