ಭಾರತೀಯ ರೈಲ್ವೆ ಇಲಾಖೆಯು ಮಹತ್ತರ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಅಪರಾಧ ತಡೆಗಟ್ಟಲು, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಯ ಹಿನ್ನೆಲೆಯಲ್ಲಿ ದೇಶದ 7 ರೈಲು ನಿಲ್ದಾಣಗಳಲ್ಲಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ಅಂದರೆ ಎಐ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಿದೆ.
ಈ ಕುರಿತು ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಂಡಿದೆ. ಬೆಂಗಳೂರು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್, ನವದೆಹಲಿ, ಚೆನ್ನೈ, ಹೌರಾ, ಅಹಮದಾಬಾದ್, ಮತ್ತು ಪುಣೆ ಸೇರಿದಂತೆ ಏಳು ಪ್ರಮುಖ ರೈಲು ನಿಲ್ದಾಣಗಳಲ್ಲಿ AI-ಚಾಲಿತ ಮುಖ ಗುರುತಿಸುವ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ.
ಈ ತಂತ್ರಜ್ಞಾನವನ್ನು 2 ಮಿಲಿಯನ್‌ಗೂ ಹೆಚ್ಚು ಪ್ರೊಫೈಲ್‌ಗಳನ್ನು ಒಳಗೊಂಡ ಲೈಂಗಿಕ ಅಪರಾಧಿಗಳ ರಾಷ್ಟ್ರೀಯ ಡೇಟಾಬೇಸ್‌ನೊಂದಿಗೆ ಸಂಯೋಜನೆ ಮಾಡಲಾಗುವುದು. ಇದರಿಂದ ಅಪರಾಧ ಪತ್ತೆಯಲ್ಲಿ ಹೆಚ್ಚಿನ ದಕ್ಷತೆ ಸಾಧ್ಯವಾಗಲಿದೆ. ಈಗಾಗಲೇ ದೆಹಲಿ, ಬೆಂಗಳೂರು, ಮತ್ತು ಹೈದರಾಬಾದ್‌ನಂತಹ ಮಹಾನಗರಗಳಲ್ಲಿ AI ಅನ್ನು ಪ್ರಾಯೋಗಿಕವಾಗಿ ಪರೀಕ್ಷಿಸಲಾಗಿದೆ.