ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ತಂಡ ಪ್ರಕಟಿಸಲಾಗಿದೆ.
ಮೊದಲ ಪಂದ್ಯಕ್ಕೆ 16 ಸದಸ್ಯರ ತಂಡವನ್ನು ಭಾರತ ಪ್ರಕಟಿಸಿದೆ. ಕನ್ನಡಿಗ ಕೆ.ಎಲ್. ರಾಹುಲ್ ಕೂಡ ತಂಡಕ್ಕೆ ಮರಳಿ ಸೇರಿದ್ದಾರೆ. ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್ ಕೀಪರ್ ರಿಷಬ್ ಪಂತ್, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಮೊದಲ ಟೆಸ್ಟ್ ಗೆ ಆಯ್ಕೆಯಾಗಿದ್ದಾರೆ.
ಎಡಗೈ ವೇಗದ ಬೌಲರ್ ಯಶ್ ದಯಾಳ್ ಅವರಿಗೆ ಮೊದಲ ಬಾರಿಗೆ ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ಸಿಕ್ಕಿದೆ. ಟೆಸ್ಟ್ ಸರಣಿಯ ಮೊದಲ ಪಂದ್ಯವು ಸೆಪ್ಟೆಂಬರ್ 19 ರಿಂದ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಜಸ್ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.