ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಗೆಲ್ಲುವುದರ ಮೂಲಕ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದೆ.
ಸೆಂಚುರಿಯನ್ನ ಸೂಪರ್ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ನಡೆದ ನೂರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಗಳಿಸಿತು.
ಈ ಕಠಿಣ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಕೂಡ ಕೊನೆಯವರೆಗೂ ಹೋರಾಟ ನಡೆಸಿತು. ಕೊನೆಗೆ ಸೋಲು ಕಂಡಿತು. ಆದರೆ, 219 ರನ್ ಗಳಿಸಿರುವ ಭಾರತ ತಂಡ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಜಪಾನ್ ದೇಶದ ದಾಖಲೆ ಮುರಿಯುವ ಮೂಲಕ ಈ ದಾಖಲೆ ಬರೆದಿದೆ.
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ 200ಕ್ಕೂ ಅಧಿಕ ರನ್ ಗಳಿಸಿದ ವಿಶ್ವ ದಾಖಲೆಯೊಂದು ಜಪಾನ್ ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ಜಪಾನ್ ತಂಡವು ಒಟ್ಟು 7 ಬಾರಿ 200ಕ್ಕೂ ಅಧಿಕ ರನ್ ಗಲಿಸಿದ ದಾಖಲೆ ಬರೆದಿತ್ತು. ಸದ್ಯ ಭಾರತ ತಂಡ ಈ ದಾಖಲೆ ಮುರಿದಿದೆ.
2024 ರಲ್ಲಿ ಟೀಮ್ ಇಂಡಿಯಾ ಒಟ್ಟು 8 ಬಾರಿ 200ಕ್ಕೂ ಅಧಿಕ ರನ್ ಗಳಿಸಿದೆ. ಈ ಮೂಲಕ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್ಗಳಿಸಿದ ತಂಡಗಳ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.
ಈ ಪಂದ್ಯದಲ್ಲಿ ಭಾರತ ತಂಡದ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ಮಾತ್ರ ಗಳಿಸಿ ಸೋಲು ಒಪ್ಪಿಕೊಂಡಿದೆ. ಭಾರತ ತಂಡವು ಸರಣಿಯಲ್ಲಿ 2-1 ಅಂತರದ ಮುನ್ನಡೆ ಸಾಧಿಸಿದೆ.