
t20 World Cup 2024 ಸೂಪರ್-8ರಲ್ಲಿನ ಪಂದ್ಯಗಳು ಕೂಡ ತೀವ್ರ ಕುತೂಹಲಕ್ಕೆ ಕಾರಣವಾಗುತ್ತಿವೆ.
ಸದ್ಯ ಗ್ರೂಪ್-1 ರಲ್ಲಿ ಕಣಕ್ಕಿಳಿದಿರುವ 4 ತಂಡಗಳಲ್ಲಿ ಮೂರು ತಂಡಗಳು ಸೆಮಿಫೈನಲ್ ಹಾದಿಯಲ್ಲೆ. ಹೀಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಕ್ವಾರ್ಟರ್ ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಜೂನ್ 25 ರಂದು ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡ ನೇರವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಒಂದು ವೇಳೆ ಸೋತರೆ ನೆಟ್ ರನ್ ರೇಟ್ ಗಣನೆಗೆ ಬರಲಿದೆ.
ಪ್ರಸ್ತುತ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ 4 ಅಂಕಗಳೊಂದಿಗೆ +2.425 ನೆಟ್ ರನ್ ರೇಟ್ ಹೊಂದಿದೆ. ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾ 2 ಅಂಕಗಳೊಂದಿಗೆ +0.223 ನೆಟ್ ರನ್ ಹೊಂದಿದೆ. 2 ಅಂಕಗಳೊಂದಿಗೆ -0.650 ನೆಟ್ ರನ್ ರೇಟ್ ಹೊಂದಿರುವ ಅಫ್ಘಾನಿಸ್ತಾನ್ ತಂಡವು ಮೂರನೇ ಸ್ಥಾನದಲ್ಲಿದೆ. 2 ಪಂದ್ಯಗಳಲ್ಲೂ ಸೋಲನುಭವಿಸಿರುವ ಬಾಂಗ್ಲಾದೇಶ್ ತಂಡ -2.489 ನೆಟ್ ರನ್ ರೇಟ್ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಭಾರತ ಗೆದ್ದರೆ ನೇರವಾಗಿ ಸೆಮಿಫೈನಲ್ ಗೆ ಪ್ರವೇಶ ಪಡೆಯಲಿದೆ. ಆಸ್ಟ್ರೇಲಿಯಾ ತಂಡ ಭಾರತ ತಂಡಕ್ಕೆ ಸೋಲುಣಿಸಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಏರಿದರೆ, ಇಂಡಿಯಾ ಅಫ್ಘಾನಿಸ್ತಾನ್ ತಂಡದ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಭಾರತ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿದರೆ, ಅಫ್ಘಾನಿಸ್ತಾನ್ ತಂಡ ಬಾಂಗ್ಲಾದೇಶ್ ವಿರುದ್ಧ ಗೆದ್ದು ಸೆಮಿಫೈನಲ್ ಪ್ರವೇಶ ಮಾಡಬಹುದು.
ಹೀಗಾಗಿ ಮುಂದಿನ ಪಂದ್ಯದಲ್ಲಿ ಭಾರತ ತಂಡ ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿಯಾಗುತ್ತಿದೆ. ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಹೀನಾಯವಾಗಿ ಸೋಲನುಭವಿಸಿದರೆ, ಅಫ್ಘಾನಿಸ್ತಾನ್ ತಂಡಕ್ಕೆ ಸೆಮಿಫೈನಲ್ ಗೆ ಏರುವ ಅವಕಾಶವಿರುತ್ತದೆ. ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ್ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಹೀಗಾಗಿ ನೆಟ್ ರನ್ ರೇಟ್ ಮೂಲಕ ಭಾರತ ಅಥವಾ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್ ಗೆ ಏರುವ ಅವಕಾಶ ಅಪ್ಘಾನಿಸ್ತಾನಕ್ಕೆ ಇರಲಿದೆ.

ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಗೆದ್ದರೆ ನೇರವಾಗಿ ಸೆಮಿಫೈನಲ್ಗೇರಲಿದೆ. ಒಂದು ವೇಳೆ ಟೀಮ್ ಇಂಡಿಯಾ ಆಸೀಸ್ ವಿರುದ್ಧ ಸೋಲುವ ಪರಿಸ್ಥಿತಿ ಎದುರಾದರೆ ಹೀನಾಯ ಸೋಲು ತಪ್ಪಿಸಿಕೊಳ್ಳಬೇಕು. ಹೀಗಾಗಿ ಭಾರತ ತಂಡವು ಅಗ್ರ ಸ್ಥಾನ ಕಾಯ್ದುಕೊಳ್ಳಲೇಬೇಕಿದೆ. ಭಾರತದ ವಿರುದ್ಧ ಗೆದ್ದರೂ ಆಸ್ಟ್ರೇಲಿಯಾ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಇರಲಿದೆ. ಅತ್ತ ಬಾಂಗ್ಲಾದೇಶ್ ವಿರುದ್ಧ ಅಫ್ಘಾನಿಸ್ತಾನ್ ಅಮೋಘ ಗೆಲುವು ದಾಖಲಿಸಿ, ಉತ್ತಮ ನೆಟ್ ರನ್ ರೇಟ್ ನೆರವಿನಿಂದ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಬಹುದು. ಈ ಮೂಲಕ ಭಾರತದೊಂದಿಗೆ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್ ಪ್ರವೇಶಿಸಬಹುದು.
