ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ ರಾಯಬಾಗ ಪಟ್ಟಣದಲ್ಲಿ ಇನ್ನೂ ಉದ್ಘಾಟನೆ ಕಾಣದೆ ನಿಂತಿದೆ. ಬೆಳಗಾವಿ ಜಿಲ್ಲೆಯ ರಾಯಬಾಗದ ಕೇಂದ್ರ ಬಸ್ ನಿಲ್ದಾಣ ಹಾಗೂ ಎಪಿಎಂಸಿ ಪಕ್ಕದಲ್ಲಿ ನಿರ್ಮಿಸಲಾಗಿರುವ ಈ ಕಟ್ಟಡ ಇನ್ನೂ ಜನರ ಸೇವೆಗೆ ಲಭ್ಯವಾಗಿಲ್ಲ.
ದಿನನಿತ್ಯ ಸಾವಿರಾರು ಕಾರ್ಮಿಕರು ಹಾಗೂ ಬಡವರು ಸಂಚರಿಸುವ ಪ್ರಮುಖ ರಸ್ತೆಯಲ್ಲಿರುವ ಈ ಕ್ಯಾಂಟೀನ್, ಕಳೆದ ಮೂರು ವರ್ಷಗಳಿಂದ ಕಾಮಗಾರಿಯಲ್ಲಿ ವಿಳಂಬ ಅನುಭವಿಸಿದೆ. ಈಗ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಸಹ ಆರಂಭವಾಗದಿರುವುದು ಸಾರ್ವಜನಿಕರಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆಯಿಂದ ಯೋಜನೆ ಸ್ಥಗಿತಗೊಂಡಿದೆ ಎಂಬ ಆರೋಪ ಇದೀಗ ಕೇಳಿಬರುತ್ತಿದೆ. ಜನರ ಉಪಯೋಗಕ್ಕೆ ಬರಬೇಕಿದ್ದ ಯೋಜನೆ ವಿಳಂಬವಾಗಿರುವುದರಿಂದ ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಇದನ್ನು ಓದಿ: ಲವ್ ಜಿಹಾದ್, ಗಾಂಜಾ ಕೇಸ್ – ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್ ಬಂಧನ



















