ಬೆಂಗಳೂರು : ಅನ್ಯಾಯಕ್ಕೆ ಒಳಗಾದ ರೈತರ ಪರವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರು ನ್ಯಾಯ ಕೇಳಲು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಹೋದಾಗ, ಸುಳ್ಳು ಕೇಸ್‌ನಲ್ಲಿ ಬಂಧಿಸಿದ್ದು, ಅದನ್ನು ಪ್ರಶ್ನಿಸಲು ತೆರಳಿದ್ದ ಕಾರ್ಯಕರ್ತರಿಗೆ, ನೆಲಮಂಗಲ ಠಾಣೆಯ ಇನ್ಸ್‌ಪೆಕ್ಟರ್ ನರೇಂದ್ರ ಬಾಬು ಮೊಬೈಲ್ ಕಸಿದು, ಬೆದರಿಕೆ ಹಾಕಿದ್ದಲ್ಲದೆ, ವೀಡಿಯೋ ಚಿತ್ರೀಕರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು ಇನ್ನೊಂದೆಡೆ, ಮಾದನಾಯಕನಹಳ್ಳಿ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲ್ ಕಸಿದುಕೊಂಡು, ಸಾರ್ವಜನಿಕವಾಗಿ ನಡು ರಸ್ತೆಯಲ್ಲಿ ಎಳೆದುಕೊಂಡು ಹೋಗಿ ದೌರ್ಜನ್ಯವೆಸಗಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದೆ.
ಈ ಪ್ರಕರಣವನ್ನು ನಿಯಮಾನುಸಾರ ಪರಿಶೀಲಿಸಿ, ಕ್ರಮ ಕೈಗೊಂಡು, ಇದಕ್ಕೆ ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ ಅತೀ ಶೀಘ್ರದಲ್ಲಿ ಕಳುಹಿಸಿ ಕೊಡುವಂತೆ ಪೊಲೀಸ್ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.