ನವದೆಹಲಿ: ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಾಜಿ ಪ್ರಧಾನಿ ನಿಧನರಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.
ಅಲ್ಲದೇ, ಹಲವಾರು ನಾಯಕರು ಸಂತಾಪ ಸೂಚಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಮನಮೋಹನ್ ಸಿಂಗ್ ಆಡಳಿತದ ಅವಧಿಯ ಬಗ್ಗೆ ಕೊಂಡಾಡಿ ಸಂತಾಪ ಸೂಚಿಸಿದ್ದಾರೆ. ಭಾರತದ ಮಾಜಿ ಪ್ರಧಾನಿ ನಿಧನದಿಂದ ತೀವ್ರ ದುಃಖವಾಗಿದೆ. ಡಾ. ಮನಮೋಹನ್ ಸಿಂಗ್ಜಿ ಕಷ್ಟದ ಸಮಯದಲ್ಲಿ ಭಾರತದ ಆರ್ಥಿಕತೆಯನ್ನು ಪುನರ್ನಿರ್ಮಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಸೇವೆ ಮತ್ತು ಬುದ್ಧಿವಂತಿಕೆಗಾಗಿ ಅವರು ಮೆಚ್ಚುಗೆಗೆ ಪಾತ್ರರಾಗಿದ್ದರು. ಭಾರತದ ಪ್ರಗತಿಗೆ ಅವರ ಕೊಡುಗೆ ಸದಾ ಸ್ಮರಣೀಯ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.