ಬೆಂಗಳೂರು: ಸುವರ್ಣಸೌಧದ ವಿಧಾನಪರಿಷತ್ತಿನಲ್ಲಿ(Legislative Council) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಸಿ.ಟಿ. ರವಿಗೆ(ct ravi) ಬಿಗ್ ರಿಲೀಫ್ ಸಿಕ್ಕಿದೆ.
ಕರ್ನಾಟಕ ಹೈಕೋರ್ಟ್, ಸಿ.ಟಿ. ರವಿ ವಿರುದ್ಧ ಜ. 30ರ ವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ. ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದಿಸಿದರು. ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್ಪಿಪಿ ಬಿಎ ಬೆಳ್ಳಿಯಪ್ಪ ವಾದಿಸಿದರು.
ಈ ವೇಳೆ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ. ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್ ಪಿಪಿ ವಾದ ಮಂಡಿಸಿದರು. ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಏನಿದು ಪ್ರಕರಣ?
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಸಿ.ಟಿ. ರವಿ, ಸಚಿವೆ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆಂಬ ಆರೋಪವಿದೆ. ಈ ಆರೋಪವನ್ನು ಸಿಟಿ ರವಿ ಅಲ್ಲಗಳದಿದ್ದಾರೆ. ಮತ್ತೊಂದೆಡೆ, ಅಶ್ಲೀಲವಾಗಿ ನಿಂದಿಸಿರುವುದು ಸರ್ಕಾರಿ ಟಿವಿಯಲ್ಲಿ ದಾಖಲಾಗಿರುವುದು ಇತ್ತೀಚೆಗೆ ದೃಢಪಟ್ಟಿದೆ. ಅದು ಸಿಟಿ ರವಿ ಅವರ ಧ್ವನಿಯೇ ಎಂಬುದನ್ನು ಖಚಿತಪಡಿಸಲು ಅವರ ವೈಸ್ ಸ್ಯಾಂಪಲ್ ಕೋರಲಾಗಿತ್ತು. ಆದರೆ, ವೈಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದರು. ಈ ವಿಚಾರವಾಗಿ ಹೈಕೋರ್ಟ್ ನಲ್ಲಿ ವಾದ ಪ್ರತಿವಾದ ನಡೆಯುತ್ತಿದೆ.